ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆ, ಬೆಂಗಳೂರು

ಸಂಸ್ಥೆಯ ಕಾರ್ಯವ್ಯಾಪ್ತಿ

     ಕರ್ನಾಟಕ ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಕ್ಷೇಮಾಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ತನ್ನ ಆದೇಶ ಸಂಖ್ಯೆ: ಸಕಇ/28/ಬಿಸಿಎ/90/ದಿನಾಂಕ: 31-8-1992 ರಂತೆ ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಿರುತ್ತದೆ.  ಈ ಸಂಸ್ಥೆಯು ದಿನಾಂಕ: 20-8-1993 ರಿಂದ ಕಾರ್ಯ ನಿರ್ವಹಿಸುತ್ತಿದೆ.  ಹಿಂದುಳಿದ ವರ್ಗಗಳ ಅಧ್ಯಯನ, ಈ ವರ್ಗಗಳಿಗಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಪ್ಲಾನ್ ಮಾನಿಟರಿಂಗ್, ಸಿಂಪೋಸಿಯಂ, ವರ್ಕಷಾಪ್, ಸಮೀಕ್ಷೆ ಹಾಗೂ ಮೌಲ್ಯಮಾಪನ ಮುಂತಾದ ಕಾರ್ಯಕ್ರಮಗಳನ್ನು ನಡೆಸುವುದು ಹಾಗೂ ಹಿಂದುಳಿದ ವರ್ಗಗಳ ಆಯೋಗಗಳ ವರದಿಗಳ ತುಲನಾತ್ಮಕ ಅಧ್ಯಯನ ನಡೆಸುವುದು ಈ ಸಂಸ್ಥೆಯ ಧ್ಯೇಯೋದ್ದೇಶವಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಎಸ್ ಡಬ್ಲ್ಯೂಡಿ/20/ಬಿಸಿಎ/90/ದಿನಾಂಕ:  4-8-1993ರ ಪ್ರಕಾರ ಕಾರ್ಯಕ್ರಮಗಳನ್ನು ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರ ಸಲಹೆ/ಸಹಕಾರದೊಂದಿಗೆ ಜಾರಿಗೊಳಿಸುತ್ತಿದ್ದು, 2013-14 ನೇ ಸಾಲಿನಲ್ಲಿ ದಿನಾಂಕ: 04-08-1993ರ ಆದೇಶವನ್ನು ಮಾರ್ಪಡಿಸಲಾಗಿದ್ದು, ಪ್ರಸಕ್ತ ಸಾಲಿನಿಂದ ಸರ್ಕಾರಿ ಆದೇಶ ಸಂಖ್ಯೆ: ಹಿಂವಕ 106 ಬಿಸಿಎ 2013 ದಿನಾಂಕ: 17-04-2013 ರನ್ವಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ.  ಪ್ರತಿ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಲೆಕ್ಕ ಶೀರ್ಷಿಕೆ: 2225-03-277-2-08 ರಡಿಯ ಆಯವ್ಯಯದಲ್ಲಿ 2005-06 ರಿಂದ ಹಣಕಾಸಿನ ವ್ಯವಸ್ಥೆ ಒದಗಿಸಲಾಗುತ್ತಿದೆ.  ದಿನಾಂಕ: 05-10-2013ರ ಸರ್ಕಾರಿ ಆದೇಶ ಸಂಖ್ಯೆ: ಹಿಂವಕ 107 ಬಿಸಿಎ 2103 ರಲ್ಲಿ ಸಂಸ್ಥೆಯ ನಿರ್ದೇಶಕರನ್ನು ಇಲಾಖಾ ಮುಖ್ಯಸ್ಥರೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.

      ಸರ್ಕಾರದ ಆದೇಶ ಸಂಖ್ಯೆ: ಹಿಂವಕ 106 ಬಿಸಿಎ 2013 ದಿನಾಂಕ: 17-04-2013 ರನ್ವಯ ದೇವರಾಜ ಅರಸು ಸಂಶೋಧನಾ ಸಂಸ್ಥೆಯ ಕಾರ್ಯವ್ಯಾಪ್ತಿಯನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ.

  1. ಅಲೆಮಾರಿ ಮತ್ತು ಅರೆಅಲೆಮಾರಿ ಹಾಗೂ ಬುಡಕಟ್ಟು ಜನಾಂಗಗಳ ಸಮಸ್ಯೆಗಳ ಕುರಿತಂತೆ ವಿಶೇಷ ಅಧ್ಯಯನ, ಸಂಶೋಧನೆ ಕೈಗೊಳ್ಳುವುದು ಹಾಗೂ ಪರಿಹಾರವನ್ನು ಸೂಚಿಸುವುದು.
  2. ಅಲೆಮಾರಿ ಮತ್ತು ಅರೆಅಲೆಮಾರಿ ಹಾಗೂ ಬುಡಕಟ್ಟು ಜನಾಂಗಗಳ ವೃತ್ತಿ-ಪ್ರವೃತ್ತಿ, ಆಚಾರ-ವಿಚಾರ, ಸಂಸ್ಕೃತಿ-ಸಂಪ್ರದಾಯದ ಕುರಿತಂತೆ ಜಿಲ್ಲಾಮಟ್ಟ ಮತ್ತು ತಾಲ್ಲೂಕುಮಟ್ಟದಲ್ಲಿ ಕಾರ್ಯಾಗಾರ ಹಾಗೂ ಸಮ್ಮೇಳನಗಳನ್ನು ಏರ್ಪಡಿಸುವುದು.
  3. ವಿಶೇಷವಾಗಿ ಹಿಂದುಳಿದ ವರ್ಗದ ಮಹಿಳೆಯರ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಾನ ಮತ್ತು ಶೈಕ್ಷಣಿಕ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಅಧ್ಯಯನ ಹಾಗೂ ಪರಿಹಾರಗಳನ್ನು ಸೂಚಿಸುವ ಶಿಫಾರಸ್ಸುಗಳನ್ನು ಮಾಡುವುದು.
  4. ಅಧ್ಯಯನ/ಸಂಶೋಧನಾ ವರದಿಗಳನ್ನು ದಾಖಲಿಸುವುದು ಮತ್ತು ಪ್ರಕಟಣೆ ಮಾಡುವುದು, ಸಾಕ್ಷ್ಯ ಚಿತ್ರಗಳ ನಿರ್ಮಾಣ ಮಾಡುವುದು.
  5. ಹಿಂದುಳಿದ ವರ್ಗಗಳ ಅಧ್ಯಯನಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ಕೋರ್ಸಗಳು ಹಾಗೂ ಸರ್ಟಿಫಿಕೇಟ್ ಕೋರ್ಸಗಳನ್ನು ಆಯೋಜಿಸುವುದು.
  6. ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯವನ್ನು ಪ್ರಾರಂಭಿಸುವುದು.
  7. ಹಿಂದುಳಿದ ವರ್ಗಗಳ ಕುರಿತು ಕೈಗೊಳ್ಳುವಂತಹ ಸಂಶೋಧನಾ ಕಾರ್ಯದ ಸಂದರ್ಭದಲ್ಲಿ ಅವರ ಸಂಸ್ಕೃತಿ ಮತ್ತು ನಾಗರೀಕತೆಗೆ ಸಂಬಂಧಿಸಿದಂತೆ ಲಭ್ಯವಾಗುವ ವಸ್ತುಗಳ ಪ್ರದರ್ಶನಕ್ಕೆ ಶ್ರೀ ಡಿ. ದೇವರಾಜ ಅರಸುರವರ ಹೆಸರಿನಲ್ಲಿ ಹಿಂದುಳಿದ ವರ್ಗಗಳ ಸಂಸ್ಕೃತಿ ಪ್ರತಿಬಿಂಬಿಸುವ ವಸ್ತು ಸಂಗ್ರಹಾಲಯವನ್ನು ಪ್ರಾರಂಭಿಸುವುದು.
  8. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪರಿಹಾರಾತ್ಮಕ (ರೆಮಿಡಿಯಲ್) ತರಗತಿಗಳನ್ನು ನಡೆಸುವುದು.
  9. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದು.
  10. ಹಿಂದುಳಿದ ವರ್ಗಗಳ ಬಗ್ಗೆ ವಿಶೇಷ ಅಧ್ಯಯನ/ಸಂಶೋಧನೆಗಾಗಿ ಕ್ಷೇತ್ರ ಕಾರ್ಯ ಕೈಗೊಳ್ಳುವುದು.

 

ದೇವರಾಜ ಅರಸು ಸಂಶೋಧನಾ ಸಂಸ್ಥೆಯು ರಾಜ್ಯ ವಲಯ ಯೋಜನೆಗೆ ಸೇರ್ಪಡೆಯಾಗಿದ್ದು, ಸಂಸ್ಥೆಯು ರಾಜ್ಯಮಟ್ಟದ ಕಛೇರಿಯಾಗಿದ್ದು, ಬೆಂಗಳೂರು ನಗರದಲ್ಲಿ ಕಾರ್ಯ ನಿರ್ವಹಿಸುತ್ತಿದೆ.  ಜಿಲ್ಲಾ ಮಟ್ಟದಲ್ಲಿ ಈ ಸಂಸ್ಥೆಯ ಅಧೀನ ಕಛೇರಿಗಳು ಇರುವುದಿಲ್ಲ.  ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಧಿಕಾರಿಗಳ ಮುಖಾಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.  ಈ ಸಂಸ್ಥೆಯ ಮುಖ್ಯಸ್ಥರಾಗಿ ನಿರ್ದೇಶಕರು ಕಾರ್ಯ ನಿರ್ವಹಿಸುತ್ತಿದ್ದು, ಉಪ ನಿರ್ದೇಶಕರು, ಆಡಳಿತಾಧಿಕಾರಿಗಳು, ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಕಛೇರಿ ಕೆಲಸ ಹಾಗೂ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿರ್ದೇಶಕರಿಗೆ ಸಹಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ಇತ್ತೀಚಿನ ನವೀಕರಣ​ : 04-03-2021 06:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಡಿ ದೇವರಾಜ ಅರಸು ಸಂಶೋಧನಾ ಸಂಸ್ಥೆ ಬೆಂಗಳೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080